ಮಡಿಕೇರಿ ಜು.12 : ತಿತಿಮತಿಯ ಹೆಬ್ಬಾಲೆ ಭಾಗದಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಇಂದು ಬೆಳಗ್ಗೆ ಮುಖ್ಯ ರಸ್ತೆಯಲ್ಲಿ ಕಾಣಿಸಿಕೊಂಡ ಕಾಡಾನೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದೆ. ಅಲ್ಲದೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನಕ್ಕೂ ಹಾನಿ ಮಾಡಿದ್ದು, ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.









