ಮಡಿಕೇರಿ ಜು.12 : ಇಂದಿರಾನಗರದ ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ಮೃತ್ಯುಂಜಯ ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನಡೆಯಿತು.
ದೇವಾಲಯದ ಆವರಣದಲ್ಲಿ ತಂತ್ರಿಗಳಾದ ಕೇರಳದ ಮನೋಹರ್ ಪಣಿಕರ್, ಸುನಿಲ್, ಪ್ರಜಿಶ್ ಅವರ ನೇತೃತ್ವದಲ್ಲಿ ಮುಂಜಾನೆಯಿಂದಲೇ ಗಣಪತಿ ಹೋಮ, ಮೃತ್ಯುಂಜಯ ಹೋಮ, ಭಗವತಿ ಪೂಜೆ ಮತ್ತು ದೇವಿಗೆ ವಿಶೇಷ ಪೂಜೆ ನೆರವೇರಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಇಂದಿರಾನಗರ, ತಾಳತ್ತಮನೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.








