ಮಡಿಕೇರಿ ಜು.12 : ಬಿಳಿಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಜು.16 ರಂದು 3ನೇ ವರ್ಷದ “ಹಿಂದೂ ಕೆಸರುಗದ್ದೆ ಕ್ರೀಡಾಕೂಟ” ನಡೆಯಲಿದೆ ಎಂದು ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್ ಸೋಮಣ್ಣ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಿಳಿಗೇರಿಯ ತುಂತಜೆ ಕುಟುಂಬಸ್ಥರ ಗದ್ದೆಯಲ್ಲಿ ಕೆಸರುಗದ್ದೆ ಕ್ರಿಕೆಟ್, ವಾಲಿಬಾಲ್, ಓಟದ ಸ್ಪರ್ಧೆ, ಹಗ್ಗಜಗ್ಗಾಟ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ ಎಂದು ಹೇಳಿದ್ದಾರೆ.
ಬೆಳಗ್ಗೆ 9 ಗಂಟೆಗೆ ಆರಂಭಗೊಳ್ಳಲಿರುವ ಕ್ರೀಡಾಕೂಟವನ್ನು ಕೃಷಿಕರಾದ ತುಂತಜೆ ಚಂದ್ರಶೇಖರ್, ತುಂತಜೆ ಜನಾರ್ಧನ, ಮಾಜಿ ಕ್ಯಾಪ್ಟನ್ ತುಂತಜೆ ದಯಾನಂದ, ಅರ್ವತ್ತೋಕ್ಲು ಪೆರಾತ ಕ್ಲಬ್ ಅಧ್ಯಕ್ಷ ಬಾಲಾಡಿ ಪ್ರತಾಪ್, ತಾ.ಪಂ ಮಾಜಿ ಸದಸ್ಯೆ ತುಂತಜೆ ಕುಮುದ, ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಅರವಿಂದ್ ಉದ್ಘಾಟಿಸಲಿದ್ದಾರೆ.
ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂಥರ್ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬೆಂಗಳೂರು ಅಲ್ಟ್ರ ಗ್ರೂಪ್ಸ್‍ನ ರಾಜೇಶ್ ತೇನನ, ಮಕ್ಕಳ ತಜ್ಞ ಮೇಜರ್ ಡಾ.ಕುಶ್ವಂತ್ ಕೋಳಿಬೈಲು, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಪ್ರಧಾನ ಕಾರ್ಯದರ್ಶಿ ಅಂಬೆಕಲ್ಲು ನವೀನ್, ಮೇಕೇರಿ ಗ್ರಾ.ಪಂ ಅಧ್ಯಕ್ಷ ಬಿ.ಬಿ.ದಿನೇಶ್, ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಬಾಲಾಡಿ ದಿಲೀಪ್‍ಕುಮಾರ್, ವಿಶೇಷ ಅತಿಥಿಗಳಾಗಿ ಚಲನಚಿತ್ರ ಕಲಾವಿದರಾದ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಪಾಲ್ಗೊಳ್ಳಲಿದ್ದಾರೆ.
ಹೆಚ್ಚಿನ ಮಾಹಿತಿಗೆ ಮಂಜು ಕಾಳೆಯಂಡ-8762468188, ದರ್ಶನ್ ಪರ್ಲಕೋಟಿ-9481431122 ಸಂಪರ್ಕಿಸುವಂತೆ ಅರವಿಂದ್ ಸೋಮಣ್ಣ ತಿಳಿಸಿದ್ದಾರೆ.









