ಮಡಿಕೇರಿ ಜು.12 : ತಾಲ್ಲೂಕಿನ ಗಾಳಿಬೀಡು ಬಳಿ ಇರುವ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳಲ್ಲಿ 5 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್, 10 ಕೊನೆಯ ದಿನವಾಗಿದೆ. ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24 ರ ಶೈಕ್ಷಣಿಕ ಅವಧಿಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 31-07-2014 ರ ನಡುವೆ ಜನಿಸಿರಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಜವಾಹರ್ ನವೋದಯ ವಿದ್ಯಾಲಯ, ಗಾಳಿಬೀಡು ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*