ಮಡಿಕೇರಿ ಜು.12 : ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24 ನೇ ಸಾಲಿನ ಸೀಮಿತ ಅವಧಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ಮೀನುಗಾರಿಕೆ/ ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 5 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹೊಂದಿರಬೇಕು. ಎಂ.ಎಸ್ ಆಫೀಸ್‍ನಲ್ಲಿ ಪರಿಣಿತಿ ಇರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಾಸಿಕ ರೂ.42 ಸಾವಿರ ಗೌರವ ಧನ ನೀಡಲಾಗುತ್ತದೆ.
ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಹರಿರುವ ಅಭ್ಯರ್ಥಿಗಳು ಜುಲೈ, 25 ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರು, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*