ಮಡಿಕೇರಿ ಜು.12 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ ನವೆಂಬರ್, 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗು ಜಿಲ್ಲೆಯಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.
ಸಾಂತ್ವನ ಕೇಂದ್ರದಲ್ಲಿ ಈವರೆಗೆ 4,873 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು 4,856 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2023-24 ನೇ ಆರ್ಥಿಕ ಸಾಲಿನಲ್ಲಿ 2023 ರ ಏಪ್ರಿಲ್, 01 ರಿಂದ ಜೂನ್ ತಿಂಗಳ ಅಂತ್ಯದವರೆಗೆ 69 ಪ್ರಕರಣಗಳು ದಾಖಲೆಗೆ 58 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ 17 ಪ್ರಕರಣಗಳು ಇತ್ಯರ್ಥದ ಹಂತದಲ್ಲಿ ಇರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಕೆ.ಎಸ್.ಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್. ರೈ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9880985939 ಸಂಪರ್ಕಿಸಬಹುದು.









