ಮಡಿಕೇರಿ ಜು.12 : ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವು ಜು.13 ರಿಂದ 21 ರವರೆಗೆ ಶ್ರೀಮಂಗಲದ ನಾಲ್ಕೇರಿ ಜಂಕ್ಷನ್‍ನ ಮಣಿ ಕಾಂಪ್ಲೆಕ್ಸ್‍ನಲ್ಲಿ ನಡೆಯಲಿದೆ. ತಮ್ಮಲ್ಲಿ ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಿಕೊಳ್ಳುವಂತೆ ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ತಿಳಿಸಿದ್ದಾರೆ.









