ಮಡಿಕೇರಿ ಜು.12 : ರಾಷ್ಟ್ರೀಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮೌನ ಪ್ರತಿಭಟನೆ ನಡೆಸಿತು.
ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ಸೂಚಿಸಿದ ಪಕ್ಷದ ಪ್ರಮುಖರು ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು.
ನಗರದ ಗಾಂಧಿ ಮೈದಾನದಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು, ರಾಹುಲ್ ಗಾಂಧಿ ವಿರುದ್ಧ ರಾಜಕೀಯ ಪ್ರೇರಿತ ದುರುದ್ದೇಶದ ದೂರುಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಹಿರಿಯ ಮುಖಂಡ ಟಿ.ಪಿ.ರಮೇಶ್, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್, ಹೆಚ್.ಎಂ.ನಂದಕುಮಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ನಗರ ಕಾಂಗ್ರೆಸ್ ಆಧ್ಯಕ್ಷ ರಾಜೇಶ್ ಯಲ್ಲಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮುಖಂಡರಾದ ಕೊಲ್ಯದ ಗಿರೀಶ್, ಸತೀಶ್, ಕಾನೆಹಿತ್ಲು ಮೊಣ್ಣಪ್ಪ, ಜುಲೇಕಾಬಿ, ಮೀನಾಜ್ ಪ್ರವಿಣ್, ಮಂಡಿರ ಸದಾ ಮುದ್ದಪ್ಪ, ಮಮ್ತಾಜ್ ಬೇಗಂ, ಪೀಟರ್, ಅಬ್ದುಲ್ ರಜಾಕ್, ಪುಲಿಯಂಡ ಜಗದೀಶ್, ಕಟ್ರತನ ವೆಂಕಟೇಶ್, ಪ್ರಕಾಶ್ ಆಚಾರ್ಯ, ಬಾಚಮಂಡ ಲವ ಚಿಣ್ಣಪ್ಪ, ಬೊಳ್ಳಂಡ ಶರಿ ಗಿರೀಶ್, ಅಯಿಲಫಂಡ ಪುಷ್ಪ ಪೂಣಚ್ಚ, ಸೂರಜ್ ಹೊಸೂರು, ಜೆ.ಸಿ.ಜಗದೀಶ್, ಚಂದ್ರಶೇಖರ್ ಮತ್ತಿತರ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*