ವಿರಾಜಪೇಟೆ ಜು.13 : ಮಡಿಕೇರಿ ನಗರಸಭಾ ಸದಸ್ಯ ಹಾಗೂ ಮಡಿಕೇರಿ ಕೊಡವ ಸಮಾಜದ ನಿರ್ದೇಶಕ ಕಾಳಚಂಡ ಅಪ್ಪಣ್ಣ ಅವರ ಮೇಲಿನ ಹಲ್ಲೆಗೆ ಖಂಡನೆ ವ್ಯಕ್ತಪಡಿಸಿದರುವ ವಿರಾಜಪೇಟೆ ಕೊಡವ ಸಂಘ ಹಲ್ಲೆ ಮಾಡಿದವರನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿದೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಡವ ಸಂಘಗಳ ಒಕ್ಕೂಟದ ಅಧ್ಯಕ್ಷ ಮೆಕೇರಿರ ರವಿ ಪೆಮ್ಮಯ್ಯ, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿದವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಬೇಕು ಮತ್ತು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಕಾಳಚಂಡ ಅಪ್ಪಣ್ಣ ಅವರು ಕೊಡವ ಜನಾಂಗಕ್ಕೆ ಸೇರಿದವರಾಗಿದು,್ದ ಜನ ಸಾಮಾನ್ಯರಿಂದ ಚುನಾಯಿಸಲ್ಪಟ್ಟ ಜನಪ್ರತಿನಿಧಿ. ಓರ್ವ ಜನಪ್ರತಿನಿಧಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಾಡುಹಗಲೆ ನಡುರಸ್ತೆಯಲ್ಲಿ ಹಲ್ಲೆ ಮಾಡಿರುವುದು ಖಂಡನೀಯ ಎಂದರು.
ಐಟಿಐ ಬಳಿ ಇರುವ ಕ್ಯಾಂಟೀನ್ ಜಾಗದ ಸಮಸ್ಯೆ ಹಲವಾರು ವರ್ಷಗಳ ಹಿಂದಿನದು. ಅದನ್ನು ಕಾನೂನು ರೀತಿಯಲ್ಲಿ ವ್ಯವಹರಿಸಬೇಕೆ ವಿನಾಃ ಕಾನೂನುನ್ನು ಕೈಗೆತ್ತಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಬುಡಕಟ್ಟು ಜನಾಂಗದ ಮೇಲೆ ಇದೇ ರೀತಿ ಮುಂದುವರೆದರೆ ಮಣಿಪುರದಲ್ಲಿ ನಡೆದ ಘಟನೆಗಳು ಇಲ್ಲಿಯು ಕೂಡ ಮರುಕಳಿಸಬಹುದು ಎಂದು ಎಚ್ಚರಿಸಿದರು.
ಒಕ್ಕೂಟದ ಸಮನ್ವಯ ಅಧಿಕಾರಿ ವಕೀಲ ಮಾದಂಡ ಪೂವಯ್ಯ ಮಾತನಾಡಿ, ಜಿಲ್ಲೆಯ ಮೂಲ ನಿವಾಸಿಗಳಾದ ಕೊಡವರು ಮತ್ತು ಕೊಡವ ಭಾಷಿಗರರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿರುವುದು ಖಂಡನೀಯ. ಈ ಮಣ್ಣಿನ ಮಹತ್ವ ಜೀವವೈವಿದ್ಯ ಏನು ಎಂಬುದನ್ನು ಅರಿತುಕೊಂಡು ಅನ್ಯೋನ್ಯ ಜೀವನ ನಡೆಸುವತ್ತಿರುವಾಗ ಇಂತಹ ಕಿಡಿಗೇಡಿಗಳು ಕೊಡವರರ ಹಾಗೂ ಜಿಲ್ಲೆಯ ಹೆಸರನ್ನು ಹಾಳು ಮಾಡುತ್ತಿರುವುದುನ್ನು ಸಹಿಸಲು ಸಾಧ್ಯವಿಲ್ಲ. ಸ್ಥಳಿಯ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ದುರ್ಬಲರನ್ನಾಗಿ ಕಾಣುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಹಾಗೂ ಲೋಪದೋಷಗಳನ್ನು ಎತ್ತಿ ಹಿಡಿಯುವಲ್ಲಿ ಸದಸ್ಯರ ಪಾತ್ರ ಮಹತ್ತರವಾದದ್ದು. ಜಿಲ್ಲಾಧಿಕಾರಿಗಳು ಮತ್ತು ಪೋಲಿಸ್ ವರಿಷ್ಠಾಧಿಕಾರಿಗಳು ಇಂತಹ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಅಲ್ಲದೆ ಮಡಿಕೇರಿ ಕೊಡವ ಸಮಾಜ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಬಾಚಿರ ಜಗದೀಶ್, ಚಿಕ್ಕಪೇಟೆ ಕೊಡವ ಸಂಘದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಉಪಸ್ಥಿತರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*