ಸುಂಟಿಕೊಪ್ಪ,ಜು.13: ನಾಕೂರು ಶಿರಂಗಾಲ ಗ್ರಾ.ಪಂ ಯ 2023-24ನೇ ಸಾಲಿನ ಗ್ರಾಮ ಸಭೆಯು ಜು.14 ರಂದು ಗ್ರಾ.ಪಂ. ಅಧ್ಯಕ್ಷ ಎಂ.ಸಿ.ಜಗನ್ನಾಥ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಕಾನ್‍ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.












