ಮಡಿಕೇರಿ ಜು.13 : ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರಾದ ಆರ್.ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕಿರಿಯ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ದೂರಿಗೆ ಸಂಬಂಧಿಸಿದಂತೆ ಜು.18 ಮತ್ತು 19 ರಂದು ಲೋಕಾಯುಕ್ತ ತನಿಖಾಧಿಕಾರಿಗಳಾದ ಕಾರ್ಯಪಾಲಕ ಅಭಿಯಂತರ ಆರ್.ರವಿಶಂಕರ್ ಸ್ಥಳ ಪರಿಶೀಲನೆ ಮಾಡಲಿದ್ದಾರೆ. ಲೋಕಯುಕ್ತದಿಂದ ಪ್ರಕರಣದ ತನಿಖೆ ನಡೆಯಲಿದ್ದು, ಈ ಸಂಬಂಧ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಕೂಡ ಶ್ರಮವಹಿಸಿದ್ದಾರೆ ಎಂದು ತೆನ್ನಿರ ಮೈನಾ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*