ಪ್ಯಾರಿಸ್(ಫ್ರಾನ್ಸ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್ನ ಅತ್ಯುನ್ನತ ಗೌರವವಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ನ್ನು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದ್ದಾರೆ.
ಎರಡು ದಿನಗಳ ಭೇಟಿಗಾಗಿ ನಿನ್ನೆ ಗುರುವಾರ ಪ್ಯಾರಿಸ್ಗೆ ಆಗಮಿಸಿದ ಮೋದಿಯವರಿಗೆ ಅಲ್ಲಿನ ನಾಯಕರು ಅಭೂತಪೂರ್ವ ಸ್ವಾಗತ ನೀಡಿದರು. ಇಂದು ಪ್ರಧಾನಿಯವರು ಫ್ರೆಂಚ್ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮ್ಯಾಕ್ರನ್ ಜೊತೆಗೆ ಭಾಗಿಯಾಗಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಒಇಂ) ವಕ್ತಾರ ಅರಿಂದಮ್ ಬಾಗ್ಚಿ ಅವರು ಇಲ್ಲಿನ ಎಲಿಸೀ ಅರಮನೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ, “ಪಾಲುದಾರಿಕೆಯ ಮನೋಭಾವವನ್ನು ಸಾಕಾರಗೊಳಿಸುವ ಹೆಜ್ಜೆಯಿದು, ಫ್ರಾನ್ಸ್ ಅಧ್ಯಕ್ಷರಿಂದ ಅತ್ಯುನ್ನತ ಪ್ರಶಸ್ತಿ” ಎಂದು ಬರೆದುಕೊಂಡಿದ್ದಾರೆ.