ಮಡಿಕೇರಿ ಜು.14 : ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ವ್ಯಕ್ತಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿ, 1 ಕೆ.ಜಿ.160 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಹೊಸತೋಟ ನಿವಾಸಿಗಳಾದ ಕೆ.ಹೆಚ್.ಫೈಜಲ್(30), ಶರೀಫ್(32), ಗೋಂದಿಬಸವನಹಳ್ಳಿ ನಿವಾಸಿ ಜಿ.ಎ.ಶಶಿಕುಮಾರ್ (31), ಗುಡ್ಡೆಹೊಸೂರು ನಿವಾಸಿ ವಿನೀತ್ (28) ಎಂಬುವವರೇ ಬಂಧಿತ ಆರೋಪಿಗಳು.
ಆರೋಪಿಗಳಿಂದ 1 ಕೆ.ಜಿ.160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವಿನೊಂದಿಗೆ ವಶಪಡಿಸಿಕೊಳ್ಳಲಾಗಿದೆ.
ಗುಡ್ಡೆಹೊಸೂರುನಿಂದ ಸಿದ್ದಾಪುರ ಕಡೆಗೆ ಹೋಗುವ ರಸ್ತೆಯಲ್ಲಿ ಮಾದಕ ವಸ್ತು ಮಾಡರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳಿಂದ 1 ಕೆ.ಜಿ.160 ಗ್ರಾಂ ಗಾಂಜಾ ಮತ್ತು 6.5 ಗ್ರಾಂ ಎಂಡಿಎಂಎ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
::: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‍ಪಿ ಮನವಿ ಮಾಡಿದ್ದಾರೆ.