ಸೋಮವಾರಪೇಟೆ ಜು.14 : ಗೋಣಿಮರೂರು ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಂದ ಗುರುವಂದನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
21 ವರ್ಷಗಳ ಹಿಂದೆ ಬೋಧನೆ ಮಾಡಿದಂತಹ ಶಿಕ್ಷಕರುಗಳಿಗೆ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100ರಷ್ಟು ಫಲಿತಾಂಶ ಗಳಿಸಲು ಶ್ರಮಿಸಿದ ಶಾಲಾ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ, 2000-2001 ನೇ ಬ್ಯಾಚಿನ ವಿದ್ಯಾರ್ಥಿಗಳಿಂದ ಗೌರವ ನಮನ ಮತ್ತು ಗುರು ವಂದನಾ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರೌಢಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ನೂತನ್ ಕುಮಾರ್, ಶಿಕ್ಷಕರಾದ ಎಂ.ಎಲ್. ಶ್ರೀಕಾಂತ್, ಕೆ.ಎಂ.ಗಿರಿಜಾಂಬ, ಹಿರಿಯ ಶಿಕ್ಷಕರಾದ ಗಣಪತಿ ಭಟ್, ಉಷಾ, ಸಾಯಿರ ಬಾನು, ದಿನೇಶ್ ಮತ್ತಿತರರು ಹಾಜರಿದ್ದರು.
ಸುಮಾರು ನೂರಕ್ಕೂ ಹೆಚ್ಚು ಜನ ಹಳೆಯ ವಿದ್ಯಾರ್ಥಿಗಳು ಗ್ರಾಮಸ್ಥರು ಮತ್ತು ಈ ಹಿಂದೆ ಕರ್ತವ್ಯ ನಿರ್ವಹಿಸಿದಂತಹ ಶಿಕ್ಷಕರುಗಳು ಭಾಗವಹಿಸಿದ್ದರು.







