ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆಯಾಗಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಮಧ್ಯಾಹ್ನ ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದೆ. ಇದರೊಂದಿಗೆ ಉಪಗ್ರಹವನ್ನು ಚಂದ್ರನ ಮೇಲ್ಮೈಯಲ್ಲಿ ಸುಲಭವಾಗಿ ಇಳಿಸುವ 6 ವಾರಗಳ ಮಿಷನ್ ಗೆ ಅಧಿಕೃತ ಚಾಲನೆ ಸಿಕ್ಕಿದೆ.
ಚಂದ್ರಯಾನ-3 ಲ್ಯಾಂಡರ್, ರೋವರ್ ಮತ್ತು ಪ್ರೊಪಲ್ಷನ್ ಮಾಡ್ಯೂಲ್ ನ್ನು ಹೊಂದಿದ್ದು, ಇದು ಸುಮಾರು 3,900 ಕಿಲೋಗ್ರಾಂಗಳಷ್ಟು ಭಾರವನ್ನು ಹೊಂದಿದೆ.