ಮಡಿಕೇರಿ ಜು.14 : ಕೊಡಗು ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಗಡಿಗ್ರಾಮ ಕರಿಕೆ ಕೂಡ ಒಂದು. ಮಳೆಗಾಲದಲ್ಲಿ ರೋಗಿಗಳ ಸಂಖ್ಯೆಯೂ ಇಲ್ಲಿ ಹೆಚ್ಚು, ಆದರೆ ಇಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಸಕಾಲದಲ್ಲಿ ಔಷಧಿ ಲಭಿಸುತ್ತಿಲ್ಲ ಎನ್ನುವ ಆರೋಪವೂ ಇದೆ.
ಪ್ರತಿವರ್ಷ ಮಳೆಗಾಲ ಬಂತೆಂದರೆ ಕೊಡಗು- ಕೇರಳ ಗಡಿಯಲ್ಲಿರುವ ಕರಿಕೆ ಗ್ರಾಮದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತವೆ. ಇಲ್ಲಿನ ರೋಗಿಗಳು ಸುಮಾರು 70 ಕಿ.ಮೀ ದೂರದಲ್ಲಿರುವ ಮಡಿಕೇರಿಯ ಜಿಲ್ಲಾಸ್ಪತ್ರೆ ಅಥವಾ ಕೇರಳದ ಪಾಣತ್ತೂರು ಆಸ್ಪತ್ರೆಗೆ ತೆರಳಬೇಕಾಗುತ್ತದೆ. ಕರಿಕೆಯಲ್ಲಿ ಆರೋಗ್ಯ ಕೇಂದ್ರ ಇದೆಯಾದರೂ ಸೂಕ್ತ ಔಷಧಿಗಳು ಸಕಾಲದಲ್ಲಿ ದೊರೆಯುತ್ತಿಲ್ಲ. ದೂರದ ಊರುಗಳಿಗೆ ತೆರಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಡ ಕುಟುಂಬಗಳಿಗೆ ಸಾಧ್ಯವಾಗುತ್ತಿಲ್ಲ.
ಇದನ್ನು ಮನಗಂಡ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಅವರು ಇಂದು ಮಡಿಕೇರಿಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳನ್ನು ಭೇಟಿಯಾಗಿ ಆರೋಗ್ಯ ಕೇಂದ್ರದ ಕುಂದು ಕೊರತೆಗಳನ್ನು ವಿವರಿಸಿದರು.
ಕರಿಕೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಟುಂಬಗಳು ಹಾಗೂ ಕೃಷಿ ಕೂಲಿ ಕಾರ್ಮಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೋಗಗಳು ಕಾಣಿಸಿಕೊಂಡರೆ ಇವರುಗಳಿಗೆ ದೂರದ ಊರುಗಳಿಗೆ ತೆರಳಿ ಚಿಕಿತ್ಸೆ ಪಡೆಯುವುದು ಅಸಾಧ್ಯವಾಗಿದೆ. ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ತೆರಳಿದರೆ ಔಷಧಿಯ ಕೊರತೆ ಎದುರಾಗುತ್ತಿದೆ. ಆದ್ದರಿಂದ ಕರಿಕೆ ಆಸ್ಪತ್ರೆಗೆ ಸಕಾಲದಲ್ಲಿ ಹೆಚ್ಚಿನ ಪ್ರಮಾಣದ ಔಷಧಿಯನ್ನು ವಿತರಿಸಬೇಕೆಂದು ಮನವಿ ಮಾಡಿದರು.
ನಂತರ ಮಾತನಾಡಿದ ಬಾಲಚಂದ್ರ ನಾಯರ್ ಜಿಲ್ಲಾ ಆರೋಗ್ಯಾಧಿಕಾರಿಗಳು ಉತ್ತಮ ಸ್ಪಂದನೆ ನೀಡಿದ್ದು, ಔಷಧಿ ಸರಬರಾಜು ಮಾಡುವ ಭರವಸೆ ದೊರೆತ್ತಿದೆ ಎಂದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*