ಮಡಿಕೇರಿ ಜು.14 : ಕುಶಾಲನಗರ ಪಟ್ಟಣದ ಇಂದಿರಾ ಬಡಾವಣೆ, ಪ್ರಥಮ ದರ್ಜೆ ಕಾಲೇಜು ಸಮೀಪದ ವಾಲ್ಮಿಕಿ ಭವನದ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳ ರಾಜ್ಯದ ಸಿಜಿನ್ ಮಂಗಳಸೆರಿ, ಸೋಮವಾರಪೇಟೆ ಕಲ್ಕಂದೂರು ನಿವಾಸಿ ಮುಸ್ತಾಫ(40), ಹಕೀಂ(23), ಗುಮ್ಮನಕೊಲ್ಲಿಯ ವಿನೋದ್(41) ಹಾಗೂ ಶಂಕರ(41) ಎಂಬವರುಗಳನ್ನು ಮಾಲು ಸಹಿತ ಬಂಧಿಸಲಾಗಿದೆ. ಆರೋಪಿಗಳಿಂದ 1.75 ಕೆ.ಜಿ. ಗಾಂಜಾ ಮತ್ತು 5.6 ಗ್ರಾಂ ಎಂ.ಡಿ.ಎಂ.ಎ ನಿಷೇಧಿತ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರಪೇಟೆ ಡಿವೈಎಸ್‍ಪಿ ಆರ್.ವಿಗಂಗಾಧರಪ್ಪ ನೇತೃತ್ವದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್, ಕುಶಾಲನಗರ ಪಟ್ಟಣ ಠಾಣಾಧಿಕಾರಿ ರವೀಂದ್ರ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.









