ಮಡಿಕೇರಿ ಜು.14 : ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ದಕ್ಷಿಣ ವಲಯದ ಡಿ.ಐ.ಜಿ.ಪಿ ಡಾ: ಎಂ.ಬಿ. ಬೋರಲಿಂಗಯ್ಯ, ಭೇಟಿ ನೀಡಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ಈ ಸಂದರ್ಭ ಕಾನೂನು ಸುವ್ಯವಸ್ಥೆ ಹಾಗೂ ಪ್ರಾಕೃತಿಕ ವಿಪತ್ತು ಸಂದರ್ಭ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು.
ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.