ಸೋಮವಾರಪೇಟೆ ಜು.15 : ಚಾಮುಂಡೇಶ್ವರಿ ಬಳಗದ ವತಿಯಿಂದ ಆಷಾಢದ ಕೊನೆಯ ಶುಕ್ರವಾರದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಪಟ್ಟಣದ ಟ್ಯಾಕ್ಸಿ ನಿಲ್ದಾಣದಲ್ಲಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮವನ್ನು ಉದ್ಯಮಿ ಗಿರಿಷ್ಮಲ್ಲಪ್ಪ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ದೇವಿಗೆ ಅರ್ಚನೆ ಯೊಂದಿಗೆ ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಹಿಂದುಜಾಗರಣ ವೇದಿಕೆಯ ಸಂಚಾಲಕ ಸುಭಾμï ತಿಮ್ಮಯ್ಯ, ಚಾಮುಂಡೇಶ್ವರಿ ಬಳಗದ ಸಂಚಾಲಕ ರೋಹಿತ್ ಪೂಜಾರಿ, ಪ್ರಮುಖರುಗಳಾದ ಎಚ್.ಎಸ್.ಗಂಗಾ, ಕಾಶಿ ಗೋಪಾಲ್ ಮತ್ತಿತರರು ಇದ್ದರು.