ಮಡಿಕೇರಿ ಜು.15 : ಸರ್ವರಿಗೂ ಸಮಪಾಲು ಸೂತ್ರದಡಿ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕೆ.ಜಿ.ಪೀಟರ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕ್ರೈಸ್ತ ಸಮುದಾಯದ ಕಳೆದ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ನಿಗಮವನ್ನು ಘೋಷಿಸಿ 100 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನಾರ್ಹ ಎಂದು ಹೇಳಿದ್ದಾರೆ.
ಪ್ರತ್ಯೇಕ ನಿಗಮ ಸ್ಥಾಪನೆಯಿಂದ ಹಿಂದುಳಿದಿರುವ ಕ್ರೈಸ್ತರ ಅಭ್ಯುದಯಕ್ಕೆ ಸಹಕಾರಿಯಾಗಲಿದೆ. ಶೈಕ್ಷಣಿಕ ಪ್ರಗತಿಗೂ ಪೂರಕವಾಗಿದೆ ಮತ್ತು ಕ್ರೈಸ್ತ ಮಂದಿರಗಳ ಅಭಿವೃದ್ಧಿಯೂ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಾರಣಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು 60 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ 10 ಮೊರಾರ್ಜಿ ಶಾಲೆಗಳನ್ನು ತೆರೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಪಿಯುಸಿ ವಿದ್ಯಾರ್ಥಿಗಳಿಗೆ ಜೆಇಇ, ಎನ್‌ಇಇಟಿ ಮತ್ತು ಸಿಇಟಿಗೆ ತರಬೇತಿ ನೀಡಲು 8 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವಾಗಿದೆ ಎಂದು ಪೀಟರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*