ಮಡಿಕೇರಿ ಜು.15 : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜು.23 ರ ಭಾನುವಾರದಂದು ನಡೆಯಲ್ಲಿದೆ.
ಮಡಿಕೇರಿಯ ಪತ್ರಿಕಾಭವನದಲ್ಲಿ ಬೆಳಿಗ್ಗೆ 12 ಗಂಟೆಗೆ ನಡೆಯಲ್ಲಿರುವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಉದ್ಘಾಟಿಸಲ್ಲಿದ್ದಾರೆ. ಸಂಘದ ಅಧ್ಯಕ್ಷರಾದ ಬಿ.ಆರ್.ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪಾಲ್ಗೊಳ್ಳಲ್ಲಿದ್ದಾರೆ. ಮುಖ್ಯ ಅತಿಥಿಗಳಾಗಿ ತೇಲಪಂಡ ಶಿವಕುಮಾರ್ ನಾಣಯ್ಯ, ರಾಜ್ಯ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ,ರಾಜ್ಯ ಸಂಘದ ನಿರ್ದೇಶಕರಾದ ಟಿ.ಎನ್.ಮಂಜುನಾಥ್, ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾದ ಸುನಿಲ್ ಪೊನ್ನೆಟ್ಟಿ ಪಾಲ್ಗೊಳ್ಳಲ್ಲಿದ್ದಾರೆ.
ಒಟ್ಟು 15 ಪತ್ರಕರ್ತರಿಗೆ ಈ ಸಂದರ್ಭ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇದೇ ಸಂದರ್ಭ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಶಸ್ತಿ ಪಡೆದ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ ಸಂಘದ ಪ್ರಶಸ್ತಿ ಪಡೆದುಕೊಂಡಿರುವ ಪುತ್ತರೀರ ಕರುಣ್ ಕಾಳಯ್ಯ, ಜಗದೀಶ್ ಜೋಡುಬೀಟಿ , ಉಳ್ಳಿಯಡ ಎಂ.ಪೂವಯ್ಯ, ಮಾದ್ಯಮ ಅಕಾಡೆಮಿ ಪ್ರಶಸ್ತಿ ಪಡೆದಿರುವ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರನ್ನು ಇದೇ ಸಂದರ್ಭ ಗೌರವಿಸಲಾಗುವುದೆಂದು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ತಿಳಿಸಿದ್ದಾರೆ.