ಮಡಿಕೇರಿ ಜು.16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪ್ರಮುಖ ಎರಡು ಬೇಡಿಕೆಗಳ ಕುರಿತು ಚರ್ಚಿಸಿತು.
ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಮೂಲಕ “ಕೃಷ್ಣಾ” ದಲ್ಲಿ ಭೇಟಿ ಮಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಕುಲಶಾಸ್ತç ಅಧ್ಯಯನ ಮತ್ತು ಕೊಡವ ಪದ ಬಳಕೆ ಕುರಿತು ಗಮನ ಸೆಳೆದರು.
ಸರ್ಕಾರಿ ದಾಖಲೆಗಳಲ್ಲಿ “ಕೊಡಗರು” ಪದ ಬಳಕೆ ಬದಲಿಗೆ “ಕೊಡವರು” ಎಂದು ಬಳಸಲು ಡಾ.ದ್ವಾರಕಾನಾಥ್ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು. ಕೊಡವ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ ಟ್ಯಾಗ್ ನೀಡಲು ಕೊಡವರ ಕುಲಶಾಸ್ತç ಅಧ್ಯಯನವನ್ನು ಶೀಘ್ರ ಆರಂಭಿಸಬೇಕೆಂದು ನಾಚಪ್ಪ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಸರ್ಕಾರದ ದಾಖಲೆಗಳಲ್ಲಿ ಮತ್ತು ರಾಜ್ಯದ ಗೆಜೆಟ್ ನಲ್ಲಿ “ಕೊಡಗರು” ಬದಲಿಗೆ “ಕೊಡವ” ಪದ ಬಳಕೆಗೆ ಕ್ರಮ ಕೈಗೊಳ್ಳಲಾಗುವುದು. ಕೊಡವರ ಕುಲಶಾಸ್ತç ಅಧ್ಯಯನವನ್ನು ಶೀಘ್ರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
::: ಪೂರಕ ಸ್ಪಂದನೆ :::
ಎರಡು ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆತ್ತಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಎನ್.ಯು.ನಾಚಪ್ಪ ಅವರು, ಸಭೆ ನಡೆಸಿ ನಮ್ಮ ಅಹವಾಲನ್ನು ಆಲಿಸಿ ಸೂಕ್ತ ಕ್ರಮದ ಭರವಸೆ ನೀಡಿರುವ ಮುಖ್ಯಮಂತ್ರಿಗಳಿಗೆ ಹಾಗೂ ಸಹಕರಿಸಿದ ಎ.ಎಸ್.ಪೊನ್ನಣ್ಣ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ನಿಯೋಗದಲ್ಲಿ ಎ.ಎಸ್.ಪೊನ್ನಣ್ಣ, ಸಿಎನ್‌ಸಿ ಪ್ರಮುಖರಾದ ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಳಂಗಂಡ ಸರೋಜ, ಕೇಚೆಟ್ಟಿರ ಪಾರ್ವತಿ, ಕಲಿಯಂಡ ಪ್ರಕಾಶ್, ಬಾಚರಣಿಯಂಡ ಚಿಪ್ಪಣ್ಣ, ಪುಲ್ಲೇರ ಕಾಳಪ್ಪ, ಅಜ್ಜಿಕುಟೀರ ಲೋಕೇಶ್, ಬೊಟ್ಟಂಗಡ ಗಿರೀಶ್, ಪಟ್ಟಮಾಡ ಕುಶ, ಅಲ್ಮಂಡ ಜೈ, ಮಂದಪಂಡ ಮನೋಜ್, ಕೇಕಡ ಕುಟ್ಟಪ್ಪ, ಕಾಂಡೇರ ಸುರೇಶ್, ಜಮ್ಮಡ ಮೋಹನ್, ಚಂಬಂಡ ಜನತ್, ಬಾಚಮಂಡ ರಾಜ ಪೂವಣ್ಣ, ಬೇಪಡಿಯಂಡ ದಿನು, ಅರೆಯಡ ಗಿರೀಶ್, ಕಾಟುಮಣಿಯಂಡ ಉಮೇಶ್, ಕಿರಿಯಮಾಡ ಶೆರಿನ್, ಕಿರಿಯಮಾಡ ಶಾನ್, ಪಟ್ಟಮಾಡ ಅರುಣ್, ಪಟ್ಟಮಾಡ ವಿಷು, ಬೊಳ್ಳಾರಪಂಡ ಮಾಚು, ಬೊಳ್ಳಾರಪಂಡ ಬೋಪಣ್ಣ, ವಾಟೇರಿರ ಪೂವಣ್ಣ, ಕಲಿಯಂಡ ಶಾನ್, ಸುಳ್ಳಿಮಾಡ ಸುತಾನ್, ಮಚ್ಚಮಾಡ ಭವಿನ್, ಅಪ್ಪೆಂಗಡ ಮಾಲೆ, ಮಾತಂಡ ಸೋಮಯ್ಯ, ಕರ್ನಂಡ ರಾಹುಲ್ ಕಾರ್ಯಪ್ಪ, ಸಂಕೇತ್ ಪೂವಯ್ಯ, ಮಾಚರಂಡ ಜಗನ್ ಕಾರ್ಯಪ್ಪ ಸಭೆಯಲ್ಲಿ ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*