ಮಡಿಕೇರಿ ಜು.16 : NEWSDESK ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳ ದಂಧೆ ವ್ಯಾಪಕವಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ.NEWSDESK
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ ದಾಳಿಗಳನ್ನು ಮುಂದುವರೆಸಿದೆ. ಜಿಲ್ಲಾ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಪ್ರವಾಸದ ನಿಮಿತ್ತ ತಂಗಲು ಬರುವ ಪ್ರವಾಸಿಗರು ಮಾದಕ ವಸ್ತು ಬಳಕೆ, ಮಾರಾಟ ಮಾಡುವುದು ಕಂಡು ಬಂದಲ್ಲಿ ಹೋಂ ಸ್ಟೇ, ರೆಸಾರ್ಟ್, ಲಾಡ್ಜ್ ಗಳ ಮಾಲೀಕರು, ಮಧ್ಯವರ್ತಿಗಳು ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ದಾಳಿ ಸಂದರ್ಭ ಮಾದಕ ವಸ್ತು ಸೇವನೆ, ಮಾರಾಟ ಕಂಡು ಬಂದಲ್ಲಿ ಮಾಲೀಕರು ಹಾಗೂ ಮಧ್ಯವರ್ತಿಗಳ ವಿರುದ್ದ ಎನ್.ಡಿ.ಪಿ.ಎಸ್. ಕಾಯಿದೆ ಕಲಂ 25ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅವುಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದಾರೆ.NEWSDESK










