ಮಡಿಕೇರಿ ಜು.17 : ಮನುಷ್ಯರಿಗೆ ಅತ್ಯವಶ್ಯಕವಾದ ಉತ್ತಮ ಪರಿಸರವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕಾಗಿದೆ ಎಂದು ಕುಶಾಲನಗರ ವಲಯ ಅರಣ್ಯ ಅಧಿಕಾರಿ ಕೆ.ವಿ.ಶಿವರಾಮ್ ತಿಳಿಸಿದ್ದಾರೆ.
ಕುಶಾಲನಗರದ ಕೃಷಿ ಮಾರುಕಟ್ಟೆ ಆವರಣದಲ್ಲಿ ಭಾನುವಾರ ವಾಕರ್ಸ್ ಅಸೋಸಿಯೇಷನ್ ತಂಡದ ಸದಸ್ಯರು ಕುಶಾಲನಗರ ಅರಣ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡ ವಾಯು ವಿಹಾರಿಗಳ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಉತ್ತಮ ವಾತಾವರಣದಿಂದ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದ ಶಿವರಾಂ, ಇದೊಂದು ವಿಶೇಷ ಕಾರ್ಯಕ್ರಮವಾಗಿದೆ ಎಂದರು ಗಿಡಗಳನ್ನು ನೆಡುವ ಮೂಲಕ ನಿರ್ವಹಣೆ ಮಾಡಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಕಳೆದ ಹಲವು ವರ್ಷಗಳಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣಕ್ಕೆ ವಾಯು ವಿಹಾರಕ್ಕೆ ತೆರಳುತ್ತಿದ್ದ ಸುಮಾರು 20ಕ್ಕೂ ಅಧಿಕ ವಾಯು ವಿಹಾರಿಗಳು ಇಲಾಖೆ ಅಧಿಕಾರಿ ಸಿಬ್ಬಂದಿಗಳೊಂದಿಗೆ ಸೇರಿ ನೂರಕ್ಕೂ ಅಧಿಕ ಗಿಡಗಳನ್ನು ನೆಡುವಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಕಾರ್ಯಕ್ರಮ ಸಂಯೋಜಕರಾದ ಎಂ ಎನ್ ಚಂದ್ರಮೋಹನ್, ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷರಾದ ಹೆಚ್.ಟಿ.ರವಿ, ಪ್ರಧಾನ ಕಾರ್ಯದರ್ಶಿ ಬಸವರಾಜ್, ಉಪ ವಲಯ ಅರಣ್ಯ ಅಧಿಕಾರಿಗಳಾದ ದೇವಯ್ಯ, ಶ್ರವಣ್ ವಿಭೂತಿ, ಚೇತನ್, ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ಇಪ್ಪತ್ತಕ್ಕೂ ಅಧಿಕ ವಾಯು ವಿಹಾರಿಗಳು ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಆವರಣದಲ್ಲಿ ನೆಟ್ಟ ಗಿಡಗಳನ್ನು ತಾವುಗಳು ಬೆಳೆಸಿ ನಿರಂತರವಾಗಿ ನಿರ್ವಹಣೆ ಮಾಡುವುದಾಗಿ ವಾಕರ್ಸ್ ಅಸೋಸಿಯೇಷನ್ ತಂಡದ ಸದಸ್ಯರು ಅಧಿಕಾರಿಗಳಿಗೆ ಭರವಸೆ ನೀಡಿದರು.
Breaking News
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*