ಮಡಿಕೇರಿ ಜು .17 : ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಆಡಳಿತ ಮಂಡಳಿಯ ಪದಗ್ರಹಣ ಕಾರ್ಯಕ್ರಮವು ಜು.19 ರಂದು ಮಧ್ಯಾಹ್ನ 3 ಗಂಟೆಗೆ ಮಡಿಕೇರಿಯ ಕೊಡಗು ಪತ್ರಿಕಾ ಭವನ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಿಕೊಳ್ಳಲಿದ್ದು, ಕಾರ್ಯಕ್ರಮವನ್ನು ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ. ಶ್ರೀಧರ ಹೆಗಡೆ ಉದ್ಘಾಟಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ ರಮೇಶ್ ನೂತನ ಸದಸ್ಯರುಗಳಿಗೆ ಪ್ರತಿಜ್ಞಾವಿಧಿ ಬೋಧನೆಯನ್ನು ನೆರವೇರಿಸಲಿದ್ದಾರೆ. ನೂತನ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಅವರಿಗೆ ನಿಕಟ ಪೂರ್ವ ಅಧ್ಯಕ್ಷ ಅಂಬೇಕಲ್ ನವೀನ್ ಅಧಿಕಾರ ಹಸ್ತಾಂತರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮುನಿರ್ ಅಹ್ಮದ್ ಮತ್ತು ರೇವತಿ ರಮೇಶ್ ಉಪಸ್ಥಿತರಿರುತ್ತಾರೆ. ನಿಯೋಜಿತ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ಗೌರವ ಕಾರ್ಯದರ್ಶಿಗಳಾಗಿ ನಿಯೋಜಿಸಲ್ಪಟ್ಟಿರುವ ಪುದಿಯನೆರವನ ರಿಷಿತ್ ಮಾದಯ್ಯ, ಬಾಳೆಯಡ ದಿವ್ಯ ಮಂದಪ್ಪ, ನಿಯೋಜಿತ ಗೌರವ ಕೋಶಾಧಿಕಾರಿಗಳಾದ ಸಿದ್ದರಾಜು ಬೆಳ್ಳಯ್ಯ ಅಲ್ಲದೆ ಸಂಘಟನಾ ಕಾರ್ಯದರ್ಶಿಗಳಾದ ಚೊಕ್ಕಾಡಿ ಪ್ರೇಮಾ ರಾಘವಯ್ಯ ಮತ್ತು ತಳೂರು ದಿನೇಶ್ ಕರುಂಬಯ್ಯ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳು, ತಾಲೂಕಿನ ವಿಶೇಷ ಆಹ್ವಾನಿತರು ಪ್ರತಿಜ್ಞಾವಧಿ ಸ್ವೀಕರಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳನ್ನು ನಡೆಸಲು ಅನುವಾಗಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪಿ.ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.