ಮಡಿಕೇರಿ ಜು.16 : ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ತಂಬಾಕು ಭಸ್ಮವಾಗಿ ಬ್ಯಾರನ್ ಗೆ ಹಾನಿಯಾದ ಘಟನೆ ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ತಂಬಾಕು ಹದ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ತಂಬಾಕು ಭಸ್ಮವಾಗಿ ಬ್ಯಾರನ್ ಮೇಲ್ಚಾವಣಿ ಸಂಪೂರ್ಣವಾಗಿ ಹಾನಿಯಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿದೆ. ಬೆಳೆಗಾರನಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.










