ಮಡಿಕೇರಿ ಜು.16 : ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವಿಗೀಡಾಗಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಕುರುಬರ ಹುಂಡಿ ಗ್ರಾಮದಲ್ಲಿ ನಡೆದಿದೆ.
ಆಹಾರ ಅರಸಿ ಬಂದ ಕಾಡಾನೆ ಜಮೀನಿನಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ತಂತಿಯನ್ನು ಸ್ಪರ್ಷಿಸಿ ಸಾವನ್ನಪ್ಪಿದೆ ಎಂದು ಹೇಳಲಾಗಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.










