ಮಡಿಕೇರಿ ಜು.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂತೂರು- ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಬಾಡಗ ವಾರ್ಡ್‍ನ ಉಪಚುನಾವಣೆಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಿ ಕೆ.ವಿ.ಭಾಗ್ಯ ಅವರು ಇತ್ತೀಚೆಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ವಲಯ ಕಾಂಗ್ರೆಸ್ ಅಧ್ಯಕ್ಷ ಕೇಶವ, ಮೂರ್ನಾಡು ವಲಯದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.







