ಮಡಿಕೇರಿ ಜು.17 : ಚುನಾವಣೆ ಸಂದರ್ಭ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ನುಡಿದಂತೆ ನಡೆಯುತ್ತಿದೆ. ಜನಪರ ಆಡಳಿತದೊಂದಿಗೆ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ಮೂರ್ನಾಡು ವಲಯ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಿ ಮಾತನಾಡಿದ ಅವರು ಇದು ಜನಾದೇಶದ ಸರ್ಕಾರವಾಗಿದ್ದು, ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಬದ್ಧವಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವ ಕಾರ್ಯ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳು ಈಗಾಗಲೇ ಜನರ ಕೈಸೇರುತ್ತಿದೆ, ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ರಾಜ್ಯದ ಜನ ನೆಮ್ಮದಿಯಿಂದ ಇದ್ದಾರೆ ಎಂದು ಅಭಿಪ್ರಾಯಪಟ್ಟರು.
ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸರ್ವ ತಯಾರಿ ಮಾಡಿಕೊಳ್ಳಬೇಕು. ಶೀಘ್ರ ವಲಯ ಮಟ್ಟದಿಂದಲೇ ಚಟುವಟಿಕೆ ಆರಂಭಿಸಬೇಕು ಎಂದು ಮಂಥರ್ ಗೌಡ ಕರೆ ನೀಡಿದರು.
ಮೂರ್ನಾಡು ವಲಯದ ಮತದಾರರ ಪಟ್ಟಿಯನ್ನು ಪರಿಶೀಲಿಸಿದ ಅವರು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.
ಕಾಂತೂರು- ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಬಾಡಗ ಉಪಚುನಾವಣೆ ಬಗ್ಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ವಿ.ಭಾಗ್ಯ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಉಪಾಧ್ಯಕ್ಷ ಪ್ರಧಾನ ಕಾರ್ಯದರ್ಶಿ ರೌಫ್, ಉಪಾಧ್ಯಕ್ಷ ಬಿ.ಜಿ.ಮೋಹನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಮೂರ್ನಾಡು ವಲಯದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*