ಕುಶಾಲನಗರ, ಜು.16 : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಕೂಡ್ಲೂರು ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಮೇ ತಿಂಗಳ ಅಂತ್ಯಕ್ಕೆ ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಸುಶೀಲಮ್ಮ ಅವರಿಗೆ ಕೂಡ್ಲೂರು ಅಂಗನವಾಡಿ ಕೇಂದ್ರದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ನಿವೃತ್ತಗೊಂಡ ಸುಶೀಲಮ್ಮ ಅವರನ್ನು ಅಂಗನವಾಡಿ ಕೇಂದ್ರ ಹಾಗೂ ಕೂಡುಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.
ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಮಾತನಾಡಿ, ಅಂಗನವಾಡಿ ಕೇಂದ್ರದಲ್ಲಿ ಸುಶೀಲಮ್ಮ ಮಕ್ಕಳ ಆರೋಗ್ಯ ಆರೈಕೆಯೊಂದಿಗೆ ಪಾಲಕರೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಮೂಲಕ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿದ್ದರು ಎಂದರು.
ಫ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ ಮಾತನಾಡಿದರು. ನವಗ್ರಾಮದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಕಲಾವತಿ, ಸಹಾಯಕಿ ತ್ರಿಪುರ ಸುಂದರಿ, ಶಾಲೆಯ ಶಿಕ್ಷಕರು ಇದ್ದರು.
Breaking News
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*
- *ಮಡಿಕೇರಿಯಲ್ಲಿ ಪರಾಕ್ರಮ್ ದಿವಸ್ ಆಚರಣೆ : ಪರೀಕ್ಷಾ ಪೇ ಚರ್ಚಾ 9ನೇ ಆವೃತ್ತಿ*
- *ಕಳೆದು ಹೋಗಿದೆ*
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*