Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ*

ಜುಲೈ 18, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ  ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಉಮ್ಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಸಿದ್ದರಾಮಯ್ಯ ಅವರು  ಉಮ್ಮನ್ ಚಾಂಡಿ  ಅವರ ಅಂತಿಮ ದರ್ಶನ ಪಡೆದು ನಮನ‌ ಸಲ್ಲಿಸಿದರು.‌

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.