ಮಡಿಕೇರಿ ಜು.18 : ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತದ ಕಾರ್ಯಪಾಲಕ ಅಭಿಯಂತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೋಟ್ಯಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ತಡೆಗೋಡೆ ಕಾಮಗಾರಿ ಕಳಪೆ ಎಂದು ಆರೋಪಿಸಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಕಿರಿಯ ಅಭಿಯಂತರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.
ದೂರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖಾಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.












