ಮಡಿಕೇರಿ ಜು.18 : ವಿಧಾನ ಸೌಧದಲ್ಲಿ ನೆನೆಗುದ್ದಿಗೆ ಬಿದ್ದಿರುವ ಅರಣ್ಯ ಕಾಯ್ದೆ ಮತ್ತು ಪರಿಹಾರ ಕುರಿತು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿದಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ, ಸಚಿವರಿಗೆ ಜಿಲ್ಲೆಯ ಸಮಸ್ಯೆಗಳ ಕುರಿತು ವಿವರಿಸಿದರು.
ಈ ಸಂದರ್ಭ ಅರಣ್ಯ ಸಚಿವರು, ಪರಿಶಿಷ್ಟ ವರ್ಗಗಳ ಮತ್ತು ಯುವಜನ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಜರಿದ್ದರು.








