ಮಡಿಕೇರಿ ಜು.18 : ಕೊಡಗಿನ ಕೆಲವು ತೋಟಗಳ ಲೈನ್ ಮನೆಗಳಲ್ಲಿ ಜೀತದಾಳುಗಳಾಗಿ ದುಡಿಯುತ್ತಿರುವ ಆದಿವಾಸಿ ಕಾರ್ಮಿಕರಿಗೆ ಸ್ವಂತ ಮನೆ ಮತ್ತು ಕೃಷಿಭೂಮಿ ನೀಡಬೇಕು ಎಂದು ದಲಿತ ಆದಿವಾಸಿ ಕೃಷಿ ಕಾರ್ಮಿಕ ಸಂಘದ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮುಖಂಡ ಡಿ.ಎಸ್.ನಿರ್ವಾಣಪ್ಪ, ಜಿಲ್ಲೆಯ ಮೂಲ ನಿವಾಸಿಗಳಾದ ಪಣಿಯರವ, ಪಂಜರಿಯರವ, ಜೇನುಕುರುಬ, ಬೆಟ್ಟಕುರುಬ, ಮಲೆ ಕುಡಿಯರು, ದಲಿತರು ಸೇರಿದಂತೆ ಸಾವಿರಾರು ಕುಟುಂಬಗಳು ಶಾಶ್ವತ ನಿವೇಶನ, ಸೂರಿಲ್ಲದೆ ಉಳ್ಳವರ ತೋಟದ ಲೈನ್ ಮನೆಗಳಲ್ಲಿ ಜೀತ ಮಾಡುತ್ತಿದ್ದಾರೆ. ಕಾರ್ಮಿಕರ ಮೂಲ ದಾಖಲೆಗಳನ್ನು ಕಸಿದುಕೊಳ್ಳುವ ಪ್ರಕರಣಗಳು ಕೂಡ ಬೆಳಕಿಗೆ ಬಂದಿದೆ ಎಂದು ಆರೋಪಿಸಿದರು.
ಮಹಿಳೆಯರು, ಮಕ್ಕಳು, ಬಾಣಂತಿಯರು ಆರೋಗ್ಯ ಮತ್ತು ಜೀವನದ ಭದ್ರತೆ ಇಲ್ಲದೆ ಭೀತಿಯ ವಾತಾವರಣದಲ್ಲಿ ಲೈನ್ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಈ ಹಿನ್ನೆಯಲ್ಲ್ಲಿ ಸಂಘಟನೆ ವತಿಯಿಂದ ಲೈನ್ ಮನೆಯ ಕಾರ್ಮಿಕರ ಪಟ್ಟಿಯನ್ನು ಸಂಗ್ರಹಿಸಲಾಗುತ್ತಿದ್ದು, ಅವರ ಸ್ವ ವಿವರ ಹಾಗೂ ದಾಖಲಾತಿಗಳನ್ನು ಸಾಧ್ಯವಾದಷ್ಟು ಸಂಗ್ರಹಿಸಿ ಹಂತ ಹಂತವಾಗಿ ಸರ್ಕಾರಕ್ಕೆ ನೀಡಲಾಗುತ್ತದೆ. ಈಗಾಗಲೇ ಒಂದು ಕಂತಿನ ಪಟ್ಟಿಯನ್ನು ನೀಡಲಾಗಿದ್ದು, 2ನೇ ಕಂತಿನ ಅರ್ಜಿಯನ್ನು ಸಂಗ್ರಹಿಸಲಾಗುತ್ತಿದೆ ಎಂದರು.
ಸಿ ಮತ್ತು ಡಿ ದರ್ಜೆಯ ಭೂಮಿಯನ್ನು ಕಂದಾಯ ಭೂಮಿಯಾಗಿ ಪರಿವರ್ತನೆ ಮಾಡಿ ಭೂ ಹೀನ ಬಡ ಕೃಷಿ ಕಾರ್ಮಿಕರಿಗೆ ಹಂಚಬೇಕು, ಆದಿವಾಸಿ ಅರಣ್ಯ ಹಕ್ಕು ಕಾಯಿದೆ ಪಾರಂಪರಿಕ ಹಕ್ಕುಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ಬಲಾಡ್ಯರ ಕಂಪನಿಗಳ ಅಕ್ರಮ ಭೂಮಿಯನ್ನು ತೆರವುಗೊಳಿಸಿ ಬಡವರಿಗೆ ನೀಡಬೇಕೆಂದು ಒತ್ತಾಯಿಸಿದ ನಿರ್ವಾಣಪ್ಪ, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಮಿತಿ ಸದಸ್ಯರಾದ ವೈ.ಜೆ.ಮಂಜು, ಜೆ.ಎಂ.ಸುರೇಶ್, ವೈ.ಬಿ.ಮೋಹನ, ವೈ.ಎಂ.ಸುರೇಶ್ ಹಾಗೂ ವೈ.ಎ.ಬಾಬು ಉಪಸ್ಥಿತರಿದ್ದರು.
Breaking News
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
- *ಭಾಗಮಂಡಲದಲ್ಲಿ ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ : ಗೌರವ ಸಮರ್ಪಣೆ*
- *ಬಲ್ಲಮಾವಟಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ : ಡಾ.ಶೈಲಜಾ ಸಲಹೆ*