ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್ (INDIA) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.