ಮಡಿಕೇರಿ ಜು.18 : ಆಡಳಿತ ವ್ಯವಸ್ಥೆಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ಬಗ್ಗೆಯೇ ಹೆಚ್ಚು ಒತ್ತು ನೀಡಿ ಮಾತನಾಡುತ್ತವೆ. ಆದರೆ ಇಲ್ಲೊಂದು ಗ್ರಾಮಕ್ಕೆ ಬಸ್ ತಂಗುದಾಣದ ಭಾಗ್ಯವೇ ಇಲ್ಲದೆ ಗ್ರಾಮಸ್ಥರು ಪರಿತಪಿಸುವ ಪರಿಸ್ಥಿತಿ ಎದುರಾಗಿದೆ.
ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಕಾಲೋನಿಯ ನಿವಾಸಿಗಳು ಬಸ್ ತಂಗುದಾಣದ ಕೊರತೆಯನ್ನು ಎದುರಿಸುತ್ತಿದ್ದಾರೆ. ಇಲ್ಲಿರುವ ಸುಮಾರು 30 ಕುಟುಂಬಗಳು ಬಸ್ ಗಾಗಿ ಮಳೆ, ಚಳಿ, ಗಾಳಿಯಲ್ಲೇ ಕಾಯುತ್ತಾ ನಿಲ್ಲಬೇಕಾದ ದುಸ್ಥಿತಿ ಎದುರಾಗಿದೆ. ಬಹಳ ವರ್ಷಗಳ ಹಿಂದೆ ಇಲ್ಲಿದ್ದ ಬಸ್ ತಂಗುದಾಣ ಶಿಥಿಲಾವಸ್ಥೆಗೊಂಡು ಬೀಳುವ ಸ್ಥಿತಿಯಲ್ಲಿತ್ತು. ಇತ್ತೀಚೆಗೆ ಸುರಿದ ಸಣ್ಣ ಮಳೆಗೆ ತಂಗುದಾಣ ಸಂಪೂರ್ಣ ಕುಸಿದು ಬಿದ್ದಿದೆ.
ತಂಗುದಾಣದ ಅವ್ಯವಸ್ಥೆಯ ಬಗ್ಗೆ ಗ್ರಾ.ಪಂ, ತಾ.ಪಂ ಮತ್ತು ಜಿ.ಪಂ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿರುವ ಗ್ರಾ.ಪಂ ಮಾಜಿ ಸದಸ್ಯೆ ಬಿ.ಕೆ.ಬೋಜಿ, ಇಲ್ಲಿ ವಾಸ ಇರುವವರು ದುರ್ಬಲರು ಎನ್ನುವ ಕಾರಣಕ್ಕೆ ನಿರ್ಲಕ್ಷಿಸಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಸುರಿಯುವ ಮಳೆಯಲ್ಲೇ ಮಕ್ಕಳು, ವಯೋವೃದ್ಧರು ಬಸ್ ಗಾಗಿ ಕಾರ್ಯಬೇಕಾಗಿದೆ. ಇನ್ನಾದರು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸುಸಜ್ಜಿತ ಬಸ್ ತಂಗುದಾಣದ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Breaking News
- *ಫೆ.27 ಮತ್ತು 28 ರಂದು ಕೊಡವ ಬಲ್ಯನಮ್ಮೆ : ವಿವಿಧ ಸ್ಪರ್ಧೆಗಳಿಗೆ ಆಹ್ವಾನ*
- *ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ : ಮಾ.11ಕ್ಕೆ ವಿಚಾರಣೆ ಮುಂದೂಡಿಕೆ*
- *ಜ.25 ರಂದು ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ*
- *ಜ.30 ರಂದು ಹುತಾತ್ಮರ ದಿನಾಚರಣೆ : ಮಡಿಕೇರಿಯಲ್ಲಿ ಪೂರ್ವಭಾವಿ ಸಭೆ*
- *ಹೈದರಾಬಾದ್ನಲ್ಲಿ ಗಮನ ಸೆಳೆದ ಕುಡಿಯರ ಉರುಟಿಕೊಟ್ಟ್ ಪಾಟ್ ನೃತ್ಯ*
- *ಮಡಿಕೇರಿ : ಜ.28 ರಂದು ಕುಂದುರುಮೊಟ್ಟೆ ದಸರಾ ಉತ್ಸವ ಸಮಿತಿಯ ಸುವರ್ಣ ಮಹೋತ್ಸವ ಸ್ಮರಣ ಸಂಚಿಕೆ “ದಶಮಿ” ಬಿಡುಗಡೆ*
- *ಮಡಿಕೇರಿಯ ಡಾ.ಅಂಬೇಡ್ಕರ್ ಭವನವನ್ನು ದಲಿತ ಸಂಘರ್ಷ ಸಮಿತಿಯ ವಶಕ್ಕೆ ನೀಡಿ*
- *‘ಸಂವಿಧಾನ್ ಸಮ್ಮಾನ್ ಅಭಿಯಾನ್’ : ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಂಡವರ ಬಣ್ಣ ಬಯಲು*
- *ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟನೆ : ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ : ಮುಖ್ಯಮಂತ್ರಿ ಸಿದ್ದರಾಮಯ್ಯ