ಮಡಿಕೇರಿ ಜು.18 : ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2023-24 ನೇ ಸಾಲಿಗೆ ಪ್ರಥಮ ಬಿ.ಎ ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ನೂತನವಾಗಿ ಪ್ರಾರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಒಳಪಡುವ ಈ ಕಾಲೇಜಿಗೆ ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿನಿಯರು ಕಚೇರಿಯಿಂದ ಅರ್ಜಿ ಪಡೆದುಕೊಂಡು ಭರ್ತಿ ಮಾಡಿ ಸೂಕ್ತ ದಾಖಲೆಗೊಂದಿಗೆ ಪ್ರವೇಶ ಪಡೆಯಲು ತಿಳಿಸಿದೆ.
ಬಿ.ಕಾಂ ತರಗತಿಗೆ ಸೇರಬಯಸುವ 5 ಜನ ವಿದ್ಯಾರ್ಥಿನಿಯರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಜುಲೈ, 25 ಪ್ರವೇಶಾತಿ ಕೊನೆಯ ದಿನಾಂಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಿ. ಜೆ. ಜವರಪ್ಪ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9945185783, 9845907344, 9008180049, 9538506370 ನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.







