ಮಡಿಕೇರಿ ಜು.18 : ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ಹೊದ್ದೂರು ವಾಟೆಕಾಡು ಸಸ್ಯ ಕ್ಷೇತ್ರದಲ್ಲಿ 2023-24 ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿ ಬೆಳೆಸಲಾಗಿರುತ್ತದೆ.
ಮಹಾಗನಿ, ಶಿವನೆ, ಸಿಲ್ವರ್, ಬೀಟೆ, ಮಳೆ ಮರ, ನೇರಳೆ, ಸುಬಾಬುಲ್, ಹಲಸು, ದೂಪ, ನಿಂಬೆ, ಅಗಸೆ, ಬೆಟ್ಟದನೆಲ್ಲಿ, ಸೀಬೆ, ಮುಂತಾದ ಸಸಿಗಳು ಲಭ್ಯವಿದ್ದು, ರೈತ ಫಲಾನುಭವಿಗಳಿಗೆ ಸರ್ಕಾರದ ಹೊಸ ಪರಿಸ್ಕೃತ ಆದೇಶದಂತೆ ರೂ.3 ಹಾಗೂ ರೂ.6 ಪ್ರತಿ ಸಸಿಗೆ ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬಹುದು.
ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಬುಕ್ ಪ್ರತಿ, ತಮ್ಮ ಜಮೀನಿನ ಆರ್‍ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು ಹಾಗೂ ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸುಮಾರು 8000-10,000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಉಪ ವಲಯ ಅರಣ್ಯ ಅಧಿಕಾರಿಗಳು 9743722646, ಗಸ್ತು ಅರಣ್ಯ ಪಾಲಕರು 7975952388 ನ್ನು ಸಂಪರ್ಕಿಸಬಹುದು ಎಂದು ಸಾಮಾಜಿಕ ಅರಣ್ಯ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*