ಮಡಿಕೇರಿ ಜು.18 : ಭಾರತ ಆಹಾರ ನಿಗಮದಲ್ಲಿ ಲಭ್ಯತೆಯನುಸಾರ ಜುಲೈ-2023 ರ ಮಾಹೆಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ‘ಸಾರವರ್ಧಿತ’ (ಪೌಷ್ಟಿಕಾಂಶ) ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದ್ದು, ಸಾರ್ವಜನಿಕ ಪಡಿತರದಾರರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೇ ಸಾರವರ್ಧಿತ ಅಕ್ಕಿಯನ್ನು ಪಡೆದು ಸದುಪಯೋಗಿಸಿಕೊಳ್ಳಬೇಕೆಂದು ಸಾರ್ವಜನಿಕ ಪಡಿತರದಾರರಲ್ಲಿ ಆಹಾರ ಇಲಾಖೆ ಕೋರಿದೆ.
ಅಂತ್ಯೋದಯ ಪಡಿತರ ಚೀಟಿಗಳಿಗೆ (ಎಎವೈ) ಪ್ರತಿ ಪಡಿತರ ಚೀಟಿಗೆ ಅಕ್ಕಿ- 35 ಕೆ.ಜಿ ಉಚಿತ, ಪಿಹೆಚ್‍ಹೆಚ್ ಪಡಿತರ ಚೀಟಿಗಳಿಗೆ (ಬಿಪಿಎಲ್) (ಆದ್ಯತಾ) ಪ್ರತಿ ಸದಸ್ಯರಿಗೆ ಅಕ್ಕಿ-05 ಕೆ.ಜಿ. ಉಚಿತ, ಎನ್‍ಪಿಹೆಚ್‍ಹೆಚ್ ಪಡಿತರ ಚೀಟಿಗಳಿಗೆ (ಎಪಿಎಲ್)(ಒಪ್ಪಿತ ಪಡಿತರ ಚೀಟಿಗಳಿಗೆ) ಏಕ ಸದಸ್ಯ ಪಡಿತರ ಚೀಟಿಗೆ ಅಕ್ಕಿ-05 ಕೆ.ಜಿ,
2 ಮತ್ತು ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ ಅಕ್ಕಿ-10 ಕೆ.ಜಿ. ಪ್ರತಿ ಕೆ.ಜಿ.ಗೆ ರೂ.15/-, ಅಂತರ್ ನ್ಯಾಯಬೆಲೆ ಅಂಗಡಿ / ಅಂತರ್ ಜಿಲ್ಲೆ /ಅಂತರ್ ರಾಜ್ಯ ಪಡಿತರ ಚೀಟಿಗಳಿಗೆ ಪೋರ್ಟಬಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಜಿಲ್ಲೆಯ/ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಇಲಾಖೆ ಪ್ರಕಟಣೆ ತಿಳಿಸಿದೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*