ಮಡಿಕೇರಿ ಜು.18 : ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ಜಿ.ಪಂ.ಉಪ ಕಾರ್ಯದರ್ಶಿ ಜಗದೀಶ್ ಅಧ್ಯಕ್ಷತೆಯಲ್ಲಿ ನಡೆಯಿತು.
ನಂತರ ಮಾತನಾಡಿದ ಅವರು ಶಿಕ್ಷಣ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲಹೆ ನೀಡಿದರು.
ನರೇಗಾ ಯೋಜನೆಯಡಿ ಶಾಲಾ ಶೌಚಾಲಯ ಕಾಮಗಾರಿ ತೆಗೆದುಕೊಳ್ಳಲಾಗಿದ್ದು, ಶೀಘ್ರ ಪೂರ್ಣಗೊಳಿಸಲಾವುದು ಎಂದು ಮಾಹಿತಿ ನೀಡಿದರು.
ಮಳೆಗಾಲ ಪ್ರಾರಂಭವಾಗಿದ್ದು ಶಾಲಾ ಕಟ್ಟಡ ದುರಸ್ತಿಗಳಿದ್ದಲ್ಲಿ ಕೂಡಲೇ ಕ್ರಮ ತೆಗೆದುಕೊಂಡು ಯಾವುದೇ ರೀತಿ ಹಾನಿಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.
ಹಾಡಿಗಳಲ್ಲಿ ವಾಸಿಸುವ ಜನರ ಆರೋಗ್ಯದ ಮೇಲೆ ಹೆಚ್ಚು ಗಮನ ನೀಡಬೇಕು. ಅನುದಾನದ ಕೊರತೆಗಳಿದ್ದರೆ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಪೂರಕವಾಗಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಲ ಜೀವನ್ ಮೀಷನ್ ಯೋಜನೆಯಡಿ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಕುಡಿಯುವ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ನರೇಗಾ ಯೋಜನೆಯಡಿ ಹಲವು ವೈಯಕ್ತಿಕ ಸೌಲಭ್ಯಗಳಿದ್ದು ಸದುಪಯೋಗಪಡಿಸಿಕೊಳ್ಳಲು ಜನರಿಗೆ ಮಾಹಿತಿ ನೀಡಿ ಎಂದು ನರೇಗಾ ತಾಂತ್ರಿಕ ಸಹಾಯಕ ಅಭಿಯಂತರಿಗೆ ತಿಳಿಸಿದರು.
ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು, ನರೇಗಾ ತಾಂತ್ರಿಕ ಸಹಾಯಕ ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*