ಮಡಿಕೇರಿ ಜು.18 : ಮಡಿಕೇರಿಯನ್ನು ಸ್ವಚ್ಚ, ಸುಂದರ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯಿದ್ದು, ಆ ನಿಟ್ಟಿನಲ್ಲಿ ಮನೆಯಲ್ಲಿನ ಕಸವನ್ನು ಪ್ಲಾಸ್ಟಿಕ್‍ನಿಂದ ವಿಂಗಡಿಸಿ ನಗರಸಭೆ ವಾಹನಕ್ಕೆ ನೀಡುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಕೋರಿದ್ದಾರೆ.
ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಸಂಬಂಧಿಸಿದಂತೆ ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.
ಏಕ ಬಳಕೆ ಪ್ಲಾಸ್ಟಿಕ್‍ನ್ನು ಬಳಸಬಾರದು. ಸಾರ್ವಜನಿಕರು ಸಹ ಎಲ್ಲೆಂದರಲ್ಲಿ ಪ್ಲಾಸ್ಟಿಕ್‍ನ್ನು ಬಿಸಾಡದೆ ಡಸ್ಟ್‍ಬಿನ್‍ಗೆ ಹಾಕಬೇಕು. ನಗರವನ್ನು ಸುಂದರ, ಸ್ವಚ್ಚವಾಗಿ ಕಾಣುವಂತಾಗಲು ಎಲ್ಲರೂ ನಗರಸಭೆಯ ಜೊತೆ ಕೈಜೋಡಿಸಬೇಕಿದೆ ಎಂದು ನಗರಸಭಾ ಅಧ್ಯಕ್ಷರು ಮನವಿ ಮಾಡಿದರು.
‘ನಮ್ಮ ತ್ಯಾಜ್ಯ, ನಮ್ಮ ಹೊಣೆ’ ಎಂಬುದನ್ನು ಅರ್ಥಮಾಡಿಕೊಂಡು ಪ್ರತಿಯೊಂದು ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಂಗಡಿಸಿ ನೀಡಬೇಕಿದೆ. ಪ್ಲಾಸ್ಟಿಕ್ ಹೊರತು ಪಡಿಸಿ ಉಳಿದ ಕಸದಿಂದ ಗೊಬ್ಬರವನ್ನು ಉತ್ಪಾದಿಸಬಹುದಾಗಿದೆ ಎಂದು ಹೇಳಿದರು.
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್ ಅವರು ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿ ಎಂಬುದನ್ನು ತಿಳಿಯಬೇಕಿದೆ. ಆದ್ದರಿಂದ ಸ್ವಯಂ ಪ್ಲಾಸ್ಟಿಕ್ ಬಳಸದೆ ಬಟ್ಟೆ ಬ್ಯಾಗನ್ನು ಬಳಸುವಂತಾಗಬೇಕು ಎಂದು ಕೋರಿದರು.
ನಗರಸಭೆ ಪರಿಸರ ಎಂಜಿನಿಯರ್ ಸೌಮ್ಯ ಅವರು ಮಾಹಿತಿ ನೀಡಿ ಜಿಲ್ಲೆಯ ಸ್ವಚ್ಛತೆಗಾಗಿ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.
ನಗರದಲ್ಲಿ ತರಕಾರಿ, ಹೂವು, ಹಣ್ಣು ಮಾರಾಟಗಾರರು, ಬೀದಿಬದಿ ವ್ಯಾಪಾರಸ್ಥರು, ಅಂಗಡಿ ಮಾಲೀಕರು ಹಾಗೂ ಸೂಪರ್ ಮಾರ್ಕೆಟ್ ಅಂಗಡಿಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿμÉೀಧಿಸಲಾಗಿದೆ’ ಎಂದು ಸೌಮ್ಯ ಅವರು ಹೇಳಿದರು.
ಪ್ಲಾಸ್ಟಿಕ್ ಬಳಕೆ ಅಥವಾ ಮಾರಾಟ ಮಾಡುವುದು ಕಂಡುಬಂದಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಅವರ ಮೇಲೆ ‘ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮದಂತೆ’ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಪ್ಲಾಸ್ಟಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಾವೆಲ್ಲಾ ಪರ್ಯಾಯ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ನಗರವನ್ನು ಪ್ಲಾಸ್ಟಿಕ್‍ನಿಂದ ಮುಕ್ತಗೊಳಿಸಲು ನಗರಸಭೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿದೆ. ಅಲ್ಲದೆ, ಇದಕ್ಕಾಗಿ ಹೊಸ ಹೊಸ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಸೌಮ್ಯ ಅವರು ತಿಳಿಸಿದರು.
ಸರ್ಕಾರದ ವತಿಯಿಂದ ರಿಯಾಯಿತಿ ದರದಲ್ಲಿ ಬಟ್ಟೆ ಬ್ಯಾಗ್ ನೀಡಿದ್ದಲ್ಲಿ ಅದನ್ನು ಜನರಿಗೆ ನೀಡುವ ಮೂಲಕ ಜಾಗೃತಿ ಮೂಡಿಸಬಹುದು ಎಂದು ನಗರಸಭೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಧನಂಜಯ ಅವರು ಹೇಳಿದರು.
ಸಭೆಯಲ್ಲಿ ಹೋಂ ಸ್ಟೇ ಅಸೋಷಿಯೇಶನ್ ಉಪಾಧ್ಯಕ್ಷರಾದ ಮೊಂತಿ ಗಣೇಶ್, ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ವಿಭಾಗದ ಪ್ರಧಾನ ಕಾರ್ಯದರ್ಶಿ ಅಂಬೆಕಲ್ಲು ನವೀನ್, ಹೋಟೆಲ್ ಅಸೋಷಿಯೇಶನ್ ಸದಸ್ಯರುಗಳು ಹಾಗೂ ಬೀದಿಬದಿ ವ್ಯಾಪಾರಸ್ಥರು, ಅಂಗಡಿ ಮಾಲೀಕರು ಇತರರು ಹಲವು ಸಲಹೆ ನೀಡಿದರು.
Breaking News
- *ಕೊಡಗು ಔಷಧಿ ವ್ಯಾಪಾರಿಗಳ ಸಂಘದಿಂದ ರಕ್ತಸಂಗ್ರಹಣಾ ಶಿಬಿರ : ಔಷಧೀಯ ಅಂಶ ಹೊಂದಿರವ ರಕ್ತದ ದಾನಕ್ಕೆ ಸವ೯ರೂ ಮುಂದಾಗಿ : ಗುರುನಾಥ್ ಕರೆ*
- *ಬೇಟೋಳಿಯಲ್ಲಿ ಮಕ್ಕಳ ಗ್ರಾಮಸಭೆ*
- *ಜ.26 ರಂದು ಕೂಡಿಗೆಯಲ್ಲಿ ಮಾನವ ಸರಪಳಿ ಹಾಗೂ ಸೌಹಾರ್ದ ಸಮ್ಮೇಳನ*
- *ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಮೂರ್ನಾಡು-ಸಿದ್ದಾಪುರ ಭಾರತೀಯ ನೃತ್ಯಕಲಾ ಶಾಲೆಯ ವಿದ್ಯಾರ್ಥಿಗಳ ಸಾಧನೆ*
- *ಕಟ್ಟೆಮಾಡು ಪ್ರಕರಣ : ಉಸ್ತುವಾರಿ ಸಚಿವರು, ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪ್ರದರ್ಶಿಸಲಿ*
- *ವಸತಿ ಸಚಿವರನ್ನು ಭೇಟಿ ಮಾಡಿದ ಅಲ್ಪಸಂಖ್ಯಾತ ಮುಖಂಡರು : ಮೂಲ ಸೌಕರ್ಯಗಳ ಕುರಿತು ಚರ್ಚೆ*
- *ಎಂ.ಎಂ.ಸುಪ್ರಿತಾಗೆ ಚಿನ್ನದ ಪದಕ*
- *ಜ.25 ರಂದು ಕಸಾಪ ದತ್ತಿ ಉಪನ್ಯಾಸ ಕಾರ್ಯಕ್ರಮ*
- *ಸುಂಟಿಕೊಪ್ಪ : ಸಾರ್ವಜನಿಕರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಿ : ಎ.ಲೋಕೇಶ್ ಕುಮಾರ್*
- *ಮಡಿಕೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಆಚರಣೆ*