ಬೆಂಗಳೂರು: 2021- 22ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹಾಗೂ 2022- 23ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿ, ಗೌರವಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ ಮೊದಲಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.