ಮಡಿಕೇರಿ ಜು.19 : ಜಿಲ್ಲೆಯ ಕುಟುಂಬದಲ್ಲಿನ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000 ಗಳನ್ನು ನೀಡುವ ಸರ್ಕಾರದ ಪ್ರಮುಖ ಕರ್ಯಕ್ರಮಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಬುಧವಾರ ಚಾಲನೆ ದೊರೆತಿದ್ದು, ಜು.20 ರಿಂದ ಕೊಡಗು ಜಿಲ್ಲೆಯಲ್ಲಿ ನೋಂದಣಿ ಕಾರ್ಯ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು:-ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ.
ಗೃಹಲಕ್ಷ್ಮಿ ಯೋಜನೆಗೆ ಯಾರು ಅರ್ಹರಾಗುವುದಿಲ್ಲ : ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‍ಟಿ ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.
ಯೋಜನೆಯಡಿ ನೋಂದಾಯಿಸಲು ಬೇಕಾದ ದಾಖಲಾತಿಗಳು: ಪಡಿತರ ಚೀಟಿಯ ಸಂಖ್ಯೆ, ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಯಜಮಾನಿ ಆಧಾರ್‍ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್‍ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ, ಆಧಾರ್‍ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ
ನೋಂದಣಿ ವಿಧಾನ: ಫಲಾನುಭವಿಗಳು ಗ್ರಾಮಒನ್, ನಗರ ಪ್ರದೇಶದಲ್ಲಿ ತೆರೆಯಲಾದ ಕೇಂದ್ರಗಳು ಹಾಗೂ ಬಾಪೂಜಿ ಸೇವಾ ಕೇಂದ್ರದ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಫಲಾನುಭವಿಗಳು ಕೇಂದ್ರಗಳಲ್ಲದೆ ಪ್ರಜಾಪ್ರತಿನಿಧಿ ಮೂಲಕ ಸಹ ಸೇವಾ ಸಿಂಧು ಪೋರ್ಟಲ್‍ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪ್ರತಿ ದಿನ ಅರ್ಹ ಫಲಾನುಭವಿಗಳಿಗೆ (ಬೆಳಗ್ಗೆ 30 ಮತ್ತು ಮಧ್ಯಾಹ್ನ 30 ಮಂದಿಗೆ ಮಾತ್ರ) ಸಮಯ ಹಾಗೂ ನೋಂದಣಿ ಕೇಂದ್ರದ ವಿವರಗಳು ಮೊಬೈಲ್ ಸಂದೇಶದ ಮೂಲಕ ಸ್ವೀಕೃತವಾಗಲಿದ್ದು, ಈ ಸಂದೇಶ ಸ್ವೀಕೃತಗೊಂಡ ಫಲಾನುಭವಿಗಳು ಮಾತ್ರ ಸಂದೇಶದಲ್ಲಿ ವಿವರಿಸಿದ ಸೇವಾ ಕೇಂದ್ರಕ್ಕೆ ನಿಗಧಿ ಪಡಿಸಿದ ಸಮಯಕ್ಕೆ ಹಾಜರಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗಧಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 8147500500 ನಂಬರ್‍ಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಅಥವಾ 1902 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆ ಇದ್ದಲ್ಲಿ ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಚೇರಿ ಸಮಯದ ನಂತರ (ಸಂಜೆ 5 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ. ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗಧಿ ಪಡಿಸಿರುವುದಿಲ್ಲ.
ಜಿಲ್ಲಾ ಹಾಗೂ ತಾಲ್ಲೂಕು ಸಹಾಯವಾಣಿ ವಿವರ ಇಂತಿದೆ: ಜಿಲ್ಲಾ ಸಹಾಯವಾಣಿ 08272-298379, 9535626053, ಮಡಿಕೇರಿ ಸಹಾಯವಾಣಿ 08272-295087, 9980898522, ಸೋಮವಾರಪೇಟೆ ಸಹಾಯವಾಣಿ 08276-200023, 9980955250, ಕುಶಾಲನಗರ ಸಹಾಯವಾಣಿ 08276-200023, 9980955250, ವಿರಾಜಪೇಟೆ ಸಹಾಯವಾಣಿ 7795732295, ಪೊನ್ನಂಪೇಟೆ ಸಹಾಯವಾಣಿ 7795732295.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 203 ಸೇವಾ ಕೇಂದ್ರಗಳಿದ್ದು ವಿವರಗಳು ಇಂತಿದೆ : ಮಡಿಕೇರಿ ತಾಲ್ಲೂಕಿನಲ್ಲಿ ಗ್ರಾಮ ಒನ್ 24, ಬಾಪೂಜಿ ಸೇವಾ ಕೇಂದ್ರ 26, ಸ್ಥಳೀಯ ಸಂಸ್ಥೆ 04 ಒಟ್ಟು 54.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಗ್ರಾಮ ಒನ್ 18, ಬಾಪೂಜಿ ಸೇವಾ ಕೇಂದ್ರ 24, ಸ್ಥಳೀಯ ಸಂಸ್ಥೆ 01 ಒಟ್ಟು 43, ಕುಶಾಲನಗರ ತಾಲ್ಲೂಕಿನಲ್ಲಿ ಗ್ರಾಮ ಒನ್ 17, ಬಾಪೂಜಿ ಸೇವಾ ಕೇಂದ್ರ 16, ಸ್ಥಳೀಯ ಸಂಸ್ಥೆ 03 ಒಟ್ಟು 36.
ವಿರಾಜಪೇಟೆ ತಾಲ್ಲೂಕಿನಲ್ಲಿ ಗ್ರಾಮ ಒನ್ 14, ಬಾಪೂಜಿ ಸೇವಾ ಕೇಂದ್ರ 19, ಸ್ಥಳೀಯ ಸಂಸ್ಥೆ 3 ಒಟ್ಟು 36, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಗ್ರಾಮ ಒನ್ 15, ಬಾಪೂಜಿ ಸೇವಾ ಕೇಂದ್ರ 19, ಒಟ್ಟು 34 ಸೇವಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*