ಮಡಿಕೇರಿ ಜು.20 : ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಪದವಿ ಮಟ್ಟದ ಕೊಡವ ಸಂಯುಕ್ತ ಅಧ್ಯಯನ ಮಂಡಳಿಯನ್ನು ರಚಿಸಲಾಗಿದೆ.
ಇದರ ಅಧ್ಯಕ್ಷರಾಗಿ ಮಂಗಳೂರಿನ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಡಾ. ಎಂ.ಎಂ.ಮೀನಾಕ್ಷಿ, ಸದಸ್ಯರುಗಳಾಗಿ ಮೈಸೂರು ಯುವರಾಜ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾಗಿರುವ ಡಾ.ರೇಖಾವಸಂತ್, ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಕಾವೇರಿಯಪ್ಪ, ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಕಾವೇರಿ ಪ್ರಕಾಶ್ ಹಾಗೂ ಕಾವೇರಿ ಕಾಲೇಜಿನ ಸಹಾಯಕ ಪ್ರಾದ್ಯಾಪಕರಾದ ಎಆ.ರೇವತಿ ಪೂವಯ್ಯ ಅವರುಗಳನ್ನು ನೇಮಕ ಮಾಡಲಾಗಿದೆ.
ಇವರುಗಳನ್ನು ಮುಂದಿನ ಮೂರು ವರ್ಷಗಳ ಅವಧಿಗೆ ನೇಮಿಸಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.









