ಮಡಿಕೇರಿ ಜು.20 : ಕರ್ನಾಟಕ ಮೂಲ ನಿವಾಸಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ 2023-24 ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ ಡಿಪ್ಲೊಮಾ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ (ಹವಿಲ್ದಾರ್ ರ್ಯಾಂಕ್‍ಮೇಲಿನ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ) ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆ ದಿನವಾಗಿದೆ. ಹವಿಲ್ದಾರ್ ಮತ್ತು ಕೆಳಗಿನ ರ್ಯಾಂಕ್‍ನ ಮಾಜಿ ಸೈನಿಕರು ಶಿಷ್ಯವೇತನಕ್ಕಾಗಿ ವೆಬ್‍ಸೈಟ್ (WWW.KSB.GOV.IN) ಆನ್‍ಲೈನ್‍ನಲ್ಲಿ ಸೆಪ್ಟೆಂಬರ್ ಮಾಹೆಯ ಒಳಗಡೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಾಲಸುಬ್ರಮಣ್ಯಂ ತಿಳಿಸಿದ್ದಾರೆ.










