ಮಡಿಕೇರಿ ಜು.20 : 2023-24ನೇ ಸಾಲಿನಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಪ್ರಕರಣವು ಜುಲೈ 2022 ರಿಂದ ಸೆಪ್ಟೆಂಬರ್ 30, 2023ರ ಒಳಗೆ ನಡೆದಿರಬೇಕು. ಪ್ರಕರಣ ನಡೆದ ದಿನಾಂಕಕ್ಕೆ 6 ರಿಂದ 18 ವರ್ಷದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರಕರಣ ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಎಫ್‍ಐಆರ್ ದಾಖಲಾಗಿರಬೇಕು.
ಪ್ರಶಸ್ತಿಯು ಪದಕ (ಚಿನ್ನ, ಬೆಳ್ಳಿ ಪದಕ), ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಒಳಗೊಂಡಿರುತ್ತದೆ. ಐಸಿಸಿಡಬ್ಲ್ಯು ಭಾರತ್ ಪ್ರಶಸ್ತಿ ರೂ. 1 ಲಕ್ಷ, ಐಸಿಸಿಡಬ್ಲ್ಯು ಧ್ರುವ ಪ್ರಶಸ್ತಿ ರೂ.75 ಸಾವಿರ, ಐಸಿಸಿಡಬ್ಲ್ಯು ಮಾರ್ಕಾಂಡೇಯ ಪ್ರಶಸ್ತಿ ರೂ.75 ಸಾವಿರ, ಐಸಿಸಿಡಬ್ಲ್ಯು ಶ್ರವಣ ಪ್ರಶಸ್ತಿ ರೂ. 75 ಸಾವಿರ, ಐಸಿಸಿಡಬ್ಲ್ಯು ಪ್ರಹ್ಲಾದ ಪ್ರಶಸ್ತಿ ರೂ.75 ಸಾವಿರ, ಐಸಿಸಿಡಬ್ಲ್ಯು ಏಕಲವ್ಯ ಪ್ರಶಸ್ತಿ ರೂ.75 ಸಾವಿರ, ಐಸಿಸಿಡಬ್ಲ್ಯು ಅಭಿಮನ್ಯು ಪ್ರಶಸ್ತಿ ರೂ.75 ಸಾವಿರ ಹಾಗೂ ಸಾಮಾನ್ಯ ಪ್ರಶಸ್ತಿ ರೂ.40 ಸಾವಿರ.
2023-24 ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ನಮೂನೆಗಳನ್ನು ವೆಬ್‍ಸೈಟ್ www.iccw.co.in ನಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 15 ರೊಳಗೆ ದಿ ಜನರಲ್ ಸೆಕ್ರೆಟರಿ, ಕರ್ನಾಟಕ ರಾಜ್ಯ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್, ನಂ.135, 3ನೇ ಕ್ರಾಸ್, ನಂದಿದುರ್ಗ ರಸ್ತೆ, ಜಯಮಹಲ್ ಎಕ್ಸ್‍ಟೆನ್ಸನ್, ಬೆಂಗಳೂರು-560046 ಇ-ಮೇಲ್ ksccwblr@gmail.com ವಿಳಾಸಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ, ದೂರವಾಣಿ 08272-298379 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*