ಮಡಿಕೇರಿ ಜು.20 : ಪ್ರಸಕ್ತ ಸಾಲಿನ ಜುಲೈ ಆವೃತ್ತಿಯ ಸ್ನಾತಕ ಬಿ.ಎ, ಬಿ.ಕಾಂ, ಬಿ.ಲಿಬ್, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಬಿ.ಎಸ್.ಡಬ್ಲ್ಯೂ ಹಾಗೆಯೇ ಸ್ನಾತಕೋತ್ತರ ಎಂ.ಎ, ಎಂ.ಎ-ಪತ್ರಿಕೋದ್ಯಮ. ಎಂ.ಕಾಂ, ಎಂ.ಬಿ.ಎ, ಎಂ.ಲಿಬ್, ಎಂ.ಎಸ್ಸಿ , ಎಂ.ಸಿ.ಎ, ಎಂ.ಎಸ್,ಡಬ್ಲ್ಯೂ ಹಾಗೂ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದೆ.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಮಡಿಕೇರಿ ಪ್ರಾದೇಶಿಕ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ಈ ಅವಕಾಶವನ್ನು ಎಲ್ಲಾ ಉದ್ಯೋಗ ಆಕಾಂಕ್ಷಿಗಳು ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ತೆರೆದ ಶಿಕ್ಷಣದ ಮೂಲಕ ಪದವಿ ಪಡೆಯಬಹುದಾಗಿದೆ ಎಂದು ಮುಕ್ತ ವಿಶ್ವ ವಿದ್ಯಾಲಯ ಮಡಿಕೇರಿ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಎ+ ಮಾನ್ಯತೆ ಪಡೆದ ದೂರ ಶಿಕ್ಷಣ ನೀಡುವ ವಿಶ್ವ ವಿದ್ಯಾನಿಲಯವಾಗಿದೆ. ಯು.ಜಿ.ಸಿ ನಿಯಮಾವಳಿ ಪ್ರಕಾರ ಪೂರ್ಣಾವಧಿಯಲ್ಲಿ ಭೌತಿಕ ಶಿಕ್ಷಣ(ರೆಗ್ಯುಲರ್) ಒಂದು ಕೋರ್ಸ್ ಮತ್ತು ದೂರ ಶಿಕ್ಷಣದಲ್ಲಿ (ಮುಕ್ತ ವಿವಿ) ಇನ್ನೊಂದು ಕೋರ್ಸ್ ಅನ್ನು ಏಕಕಾಲದಲ್ಲಿ ಮಾಡಲು ಅವಕಾಶವಿದೆ.
ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ. ಪ್ರಾದೇಶಿಕ ಕೇಂದ್ರ ಮಡಿಕೇರಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಟ್ಟಡ, ಮಡಿಕೇರಿ-571201, ದೂ.ಸಂ.08272-201147/ 8073342310/ 9141938803/ 8296215714/ 9611320191 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಡಿಕೇರಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾ ಸುಬ್ಬಯ್ಯ ತಿಳಿಸಿದ್ದಾರೆ.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*