ಬೆಂಗಳೂರು ಜು.20 : ವಿಧಾನಸಭಾ ಸ್ಪೀಕರ್ ಅವರು 10 ಮಂದಿ ಶಾಸಕರನ್ನು ಅಮಾತುಗೊಳಿಸಿದ ಕ್ರಮವನ್ನು ವಿರೋಧಿಸಿ ಬಿಜೆಪಿಯ ಶಾಸಕರು ವಿಧಾನಸೌಧದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಧರಣಿ ಸತ್ಯಾಗ್ರಹ ನಡೆಸಿದರು.
ಬಸವರಾಜ ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಶಾಸಕರಾದ ಆರಗ ಜ್ಞಾನೇಂದ್ರ, ಮುನಿರತ್ನ. ಸುರೇಶ್ ಕುಮಾರ್, ಸುನೀಲ್ ಕುಮಾರ್, ಭೈರತಿ ಬಸವರಾಜ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.










