ಮಡಿಕೇರಿ ಜು.21 : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (NATIONAL DISASTER RESPONSE FORCE) ವತಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವನಮಹೋತ್ಸವ ಆಚರಿಸಲಾಯಿತು.
ವಿವಿಧ ಬಗೆಯ ಹಣ್ಣುಗಳ ಗಿಡ ಮತ್ತು ಔಷದಿ ಸಸ್ಯಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಪ್ರಾಕೃತಿಕ ವಿಕೋಪ ತಡೆಯಲು ಮರ-ಗಿಡಗಳನ್ನು ಬೆಳಸುವ ಉದ್ದೇಶದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು ವನಮಹೋತ್ಸವ ಯೋಜನೆಯನ್ನು ಅಭಿಯಾನದ ರೀತಿಯಲ್ಲಿ ಕೈಗೊಂಡಿದೆ.
ವನಮಹೋತ್ಸವ ಅಭಿಯಾನದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ಪೆಕ್ಟರ್ ಶಾಂತಿಲಾಲ್, ಹೆಡ್ ಕಾನ್ಟೇಬಲ್ ಅರ್ಜನ್, ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ, ಗಣವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ರವಿಶಂಕರ್, ಹಿಂದಿ ವಿಭಾಗದ ಡಾ.ಶ್ರೀಧರ್ ಹೆಗಡೆ, ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಪೂಣಚ್ಚ ಇತರರು ಇದ್ದರು.