ಮಡಿಕೇರಿ ಜು.21 : ಶಿಕ್ಷಕರು ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯ ನಡುವೆ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ಬಂದು ತಲುಪಿವೆ. ಬಡ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳೇ ವರದಾನವಾಗಿದ್ದು, ಕನ್ನಡ ಭಾಷೆಯ ಉಳಿವಿಗೂ ಸಹಕಾರಿಯಾಗಿದೆ. ಆದರೆ ಕೊಡಗು ಮತ್ತು ಕೇರಳದ ಗಡಿ ಭಾಗದಲ್ಲಿರುವ ಕರಿಕೆ ಗ್ರಾಮದ ಸರ್ಕಾರಿ ಕನ್ನಡ ಶಾಲೆಗೆ ಶಿಕ್ಷಕರ ಕೊರತೆ ಎದುರಾಗಿರುವುದರಿಂದ ಇಲ್ಲಿನ ಬಡ ಮಕ್ಕಳು ಪಕ್ಕದ ಮಲೆಯಾಳ ಶಾಲೆಗೆ ಸೇರುವ ಅನಿವಾರ್ಯತೆ ಎದುರಾಗಿದೆ.
ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 70 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ ಶೇ.75 ರಷ್ಟು ಮಂದಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದವರಾಗಿದ್ದಾರೆ. ಶಾಲೆಯಲ್ಲಿ ಮುಖ್ಯೋಪಾದ್ಯಾಯರು, ಹಿಂದಿ, ಕನ್ನಡ, ಗಣಿತ, ದೈಹಿಕ ಶಿಕ್ಷಣ ಹುದ್ದೆಗಳು ಖಾಲಿ ಇವೆ. ಇದರಿಂದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿರಾಗುತ್ತಿದ್ದಾರೆ, ಅಲ್ಲದೆ ಅನಿವಾರ್ಯವಾಗಿ ಪಕ್ಕದಲ್ಲಿರುವ ಕೇರಳ ರಾಜ್ಯದ ಮಲೆಯಾಳ ಶಾಲೆಯಲ್ಲಿ ದಾಖಲಾಗುವ ಆತಂಕವೂ ಎದುರಾಗಿದೆ.
ಈ ಬಗ್ಗೆ ಮಡಿಕೇರಿಯಲ್ಲಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿ ಗಮನ ಸೆಳೆದಿರುವ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಹಾಗೂ ಸರ್ಕಾರಿ ಪ್ರೌಢಶಾಲೆಯ ಅಧ್ಯಕ್ಷ ಕೆ.ಆರ್.ಜನಾರ್ಧನ “ಖಾಯಂ ಶಿಕ್ಷಕರನ್ನು ನೇಮಿಸಿ ಗಡಿ ಶಾಲೆ ಉಳಿಸಿ” ಎಂದು ಒತ್ತಾಯಿಸಿದರು.
ಖಾಯಂ ಶಿಕ್ಷಕರನ್ನು ನೇಮಕ ಮಾಡಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಖಾಯಂ ಶಿಕ್ಷಕರ ನೇಮಕಾತಿ ಆಗುವವರೆಗೆ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಯಾವುದೇ ಶಿಕ್ಷಕರನ್ನು ವರ್ಗಾವಣೆ ಮಾಡಬಾರದು ಎಂದು ಮನವಿ ಮಾಡಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*